ನವದೆಹಲಿ: ಮನೆಯ ಮೇಲೆ ಸೌರ ವ್ಯವಸ್ಥೆ ಕಲ್ಪಿಸುವ ಪಿಎಂ ಸೂರ್ಯಘರ್ ಯೋಜನೆಗೆ ಸರ್ಕಾರದಿಂದ 75 ಸಾವಿರ ಕೋಟಿ ರೂ. ಅನುದಾನ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸಂಪುಟದಿಂದ ಅನುಮೋದನೆ ಸಿಕ್ಕಿದೆ.
ಪಿಎಂ ಸೂರ್ಯಘರ್ ಯೋಜನೆಯಡಿ ಒಂದು ಮನೆಗೆ 300 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ. ಒಂದು ಕೋಟಿ ಮನೆಗಳಿಗೆ ಸೋಲಾರ್ ಅಳವಡಿಸುವ ಗುರಿ ಹೊಂದಲಾಗಿದೆ. ಈ ಕುರಿತು ಅನುರಾಗ್ ಠಾಕೂರ್ ಮಾಹಿತಿ ತಿಳಿಸಿದ್ದಾರೆ.
2024ರ ಫೆ. 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆ ಘೋಷಿಸಿದ್ದರು.