Central Bank of India Apprentice Recruitment 2025 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 4500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 105 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ : ದಿನಾಂಕ 31/05/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಆನ್‌ಲೈನ್ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.
ಸ್ಟೈಫಂಡ್ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ :
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 400
• ಪ.ಜಾತಿ, ಪ.ಪಂಗಡ, ಮಹಿಳಾ, ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 600
• ಉಳಿದ ಅಭ್ಯರ್ಥಿಗಳು – ರೂ. 800
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 07, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 23, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 25, 2025