ವಿಷೇಶ ಚೇತನ ವಿದ್ಯಾರ್ಥಿಗಳಿಗೆ ನ್ಯಾಷನಲ್ ಇ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
ವಿಷೇಶ ಚೇತನ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2021 – 22 ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್ ಶಿಪ್ ಪಡೆಯಲು ವಿಷೇಶ ಚೇತನ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿಗಳನ್ನ ಆಹ್ವಾನಿಸಿದೆ.
ಪ್ರೀ – ಮೆಟ್ರಿಕ್ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಸ್ಕಾಲರ್ ಶಿಪ್ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಪ್ರೀ ಮೆಟ್ರಿಕ್ ಅಂದ್ರೆ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಗಳಿಗೆ ಅರ್ಜಿಗಳನ್ನ ಸಲ್ಲಿಸಲು ನವೆಂಬರ್ 15 ಕೊನೆಯ ದಿನಾಂಕವಾಗಿದ್ದು, ಕುಟುಂಬದ ಆದಾಯದ ಮಿತಿಯನ್ನು 2 ಲಕ್ಷ ರೂಪಾಯಿ ನಿಗದಿ ಪಡಿಸಲಾಗಿದೆ.
ಪೋಸ್ಟ್ ಮೆಟ್ರಿಕ್ ಮತ್ತು ಟಾಪ್ ಕ್ಲಾಸ್ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿಗಳನ್ನ ಸಲ್ಲಿಸಲು ನವೆಂಬರ್ 30 ಕಡೆಯ ದಿನಾಂಕವಾಗಿದ್ದು, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಕುಟುಂಬದ ಆದಾಯದ ಮಿತಿಯನ್ನ 2.50 ಲಕ್ಷ ರೂಪಾಯಿ ನಿಗದಿ ಪಡಿಸಲಾಗಿದೆ. ಇನ್ನೂ ಟಾಪ್ ಕ್ಲಾಸ್ ವಿದ್ಯಾರ್ಥಿಗಳ ಕುಟುಂಬದ ಆದಾಯವನ್ನ 6. ಲಕ್ಷಕ್ಕೆ ನಿಗದಿ ಪಡಿಸಲಾಗಿದೆ.