ಕೇಂದ್ರ ಸರ್ಕಾರಿ ನೌಕರರಿಗೆ 15 ದಿನ ವಿಶೇಷ ರಜೆ
ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ 15 ದಿನ ವಿಶೇಷ ರಜೆಯ ಆದೇಶವನ್ನ ಸರ್ಕಾರ ಹೊರಡಿಸಿದೆ.. ಆದ್ರೆ ಪೋಷಕರು ಅಥವಾ ಕುಟುಂಬದ ಯಾವುದೇ ಅವಲಂಬಿತ ಸದಸ್ಯರಿಗೆ ಕೋವಿಡ್ ಇದ್ದರೆ ಅಂತಹ ಸರ್ಕಾರಿ ನೌಕರರಿಗೆ 15 ದಿನ ವಿಶೇಷ ಸಾಂದರ್ಭಿಕ ರಜೆ ತೆಗೆದುಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಅಲ್ಲದೇ ವಿಶೇಷ ಸಾಂದರ್ಭಿಕ ರಜೆ ಅವಧಿ ಮುಗಿದ ನಂತರವೂ ಕುಟುಂಬದ ಸದಸ್ಯರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರೆ, ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವವರೆಗೆ ಎಸ್ಸಿಎಲ್ ಹೊರತುಪಡಿಸಿ ಯಾವುದೇ ರೀತಿಯ ರಜೆ ಪಡೆಯಬಹುದು ಎಂದು ತಿಳಿಸಲಾಗಿದೆ.
ಕೋವಿಡ್ ದೃಢಪಟ್ಟ ವ್ಯಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿರುವ ನೌಕರರು, ಹೋಂ ಕ್ವಾರಂಟೈನ್ ಆಗಿದ್ದರೆ ಅವರಿಗೆ ಏಳು ದಿನಗಳವರೆಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲಾಗುವುದು ಎಂದೂ ಕೂಡ ಹೇಳಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.