ವ್ಯಾಪಕವಾಗಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕೊರೊನಾ ತಡೆಗೆ ಮಹತ್ವದ ನಿರ್ಧಾರ ಕೈಗೊಂಡಿದ್ದು, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಮತ್ತು 10 ವರ್ಷದ ಒಳಗಿನ ಮಕ್ಕಳು ಮನೆಯಲ್ಲಿರುವಂತೆ ಜನರಲ್ಲಿ ಮನವಿ ಮಾಡಿದೆ.
ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ನಿರ್ದೇಶಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದು, ಸಾರ್ವಜನಿಕ ಪ್ರತಿನಿಧಿಗಳು, ಸರ್ಕಾರಿ ಸಿಬ್ಬಂದಿ, ಮೆಡಿಕಲ್ ಸಿಬ್ಬಂದಿ, ಅಗತ್ಯ ವಸ್ತುಗಳನ್ನು ಪೂರೈಸುವ ಮಂದಿ ಹೊರತು ಪಡಿಸಿ ಉಳಿದವರು ಮನೆಯಲ್ಲಿರಬೇಕು.
ಕೇಂದ್ರ ಸರ್ಕಾರದ ನೌಕರರು ರೊಟೆಷನ್ ಆಧಾರದಲ್ಲಿ ಪಾಳಿಗೆ ಬರಬೇಕು ಮತ್ತು ಮಾರ್ಚ್ 22 ರಿಂದ ಒಂದು ವಾರ ಯಾವುದೇ ಅಂತಾರಾಷ್ಟ್ರೀಯ ಕಂಪನಿಯ ವಿಮಾನ ಭಾರತದಲ್ಲಿ ಲ್ಯಾಂಡ್ ಆಗಲು ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದುವರೆಗೆ ದೇಶದಲ್ಲಿ 142 ಮಂದಿ ಭಾರತೀಯರು 25 ವಿದೇಶಿ ಪ್ರವಾಸಿಗರ ಸಹಿತ ಒಟ್ಟು 167 ಮಂದಿಗೆ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದ್ದು, 15 ಮಂದಿ ಸಂಪೂರ್ಣ ಗುಣ ಮುಖರಾಗಿದ್ದಾರೆ. ಕರ್ನಾಟಕದಲ್ಲಿ 14 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...








