ನವದೆಹಲಿ: ಮಹಾಮಾರಿ ಕೊರೊನಾ ಹಾಗೂ ಲಾಕ್‍ಡೌನ್‍ನಿಂದ ಸಾಮಾನ್ಯ ಜನರ ಬದುಕು ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೆ ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆಗಳು ಹೆಚ್ಚುತ್ತಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಆದರೂ ತೈಲ ಬೆಲೆ ಮಾತ್ರ ಏರುತ್ತಲೇ ಹೋಗುತ್ತಿದೆ. ಕಳೆದ ತಿಂಗಳು ಬರೊಬ್ಬರಿ 23 ಬಾರಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ಈಗ ಕಳೆದೊಂದು ವಾರದಲ್ಲಿ ಮೂರು ಬಾರಿ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.
ಕಳೆದ ಐದು ದಿನಗಳ ಹಿಂದೆ ಪ್ರತಿ ಲೀಟರ್ ಡೀಸೆಲ್‍ಗೆ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ನಿನ್ನೆ (ಜುಲೈ 12ರಂದು) ಮತ್ತೆ 16 ಪೈಸೆ ಬೆಲೆ ಏರಿಕೆ ಮಾಡಿದ್ದರೆ, ಇಂದು ಪ್ರತಿ ಲೀಟರ್ ಡೀಸೆಲ್ ಗೆ 11 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಪ್ರತಿ ಲೀಟರ್ ಡೀಸೆಲ್ ಬೆಲೆ 11.53 ರೂಪಾಯಿ ಹೆಚ್ಚಳವಾದಂತಾಗಿದೆ.
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು
ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...








