ಲಸಿಕೆ ವಿಚಾರದಲ್ಲಿ ಕೆಂದ್ರ ಸುಳ್ಳು ಭರವಸೆ ನೀಡುತ್ತಿದೆ : ಪಿ. ಚಿದಂಬರಂ
ಕೇಂದ್ರ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ ದೇಶದ ಎಲ್ಲ ವಯಸ್ಕರಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡುತ್ತೇವೆಂದು ಸುಳ್ಳು ಭರವಸೆ ನೀಡುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಪರಂ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಒಡಿಶಾ ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಕೊರತೆ ಉಂಟಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ದೇಶದ ಎಲ್ಲ ವಯಸ್ಕರಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡುತ್ತೇವೆಂದು ಸುಳ್ಳು ಭರವಸೆ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ 1.91 ಕೋಟಿ ಡೋಸ್‌ಗಳು ಲಭ್ಯ
ಅಲ್ಲದೇ ನೂತನ ಆರೋಗ್ಯ ಸಚಿವರು, ದೇಶದ ಎಲ್ಲ ರಾಜ್ಯಗಳಿಗೆ ಯಾವುದೇ ಅಡೆತಡೆಯಿಲ್ಲದೇ ಲಸಿಕೆ ಪೂರೈಸಲು ಯಾವ ರೀತಿ ಯೋಜನೆ ರೂಪಿಸಿದ್ದಾರೆ ಎಂಬುದನ್ನು ತಿಳಿಸುತ್ತಾರಾ ಎಂದು ಕೇಳಿದ್ದಾರೆ.
ದೇಶದಲ್ಲಿ ಲಸಿಕೆ ಕೊರತೆಯಾಗಿದೆ ಎಂಬುದು ಸತ್ಯ. ಲಸಿಕೆ ಉತ್ಪಾದನೆಯನ್ನು ಉತ್ಪ್ರೇಕ್ಷೆ ಮಾಡಲಾಗುತ್ತಿದೆ. ಲಸಿಕೆ ಆಮದು ಮಾಡಿಕೊಳ್ಳುವುದು ನಿಗೂಢವಾದ ವಿಷಯವಾಗಿದೆ. ಡಿಸೆಂಬರ್ 2021ರ ವೇಳೆಗೆ ದೇಶದಲ್ಲಿರುವ ವಯಸ್ಕರಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡುತ್ತೇವೆ ಎನ್ನುವುದು ಸುಳ್ಳು ಭರವಸೆ ಎಂದು ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ಧಾರೆ.
ನೇಪಾಳ: ಕೆ.ಪಿ ಶರ್ಮಾ ಓಲಿಗೆ ಮುಖಭಂಗ – ಶೇರ್ ಬಹದ್ದೂರ್ ನೂತನ ಪ್ರಧಾನಿ..!
ಟ್ವೀಟ್ ನಲ್ಲಿ ’ನೂತನ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯಾ ಅವರು ಲಸಿಕೆ ಕಾರ್ಯಕ್ರಮದ ಸತ್ಯಾಸತ್ಯತೆಯನ್ನು ದೇಶಕ್ಕೆ ತಿಳಿಸುತ್ತಾರೆಯೇ, ಒಡಿಶಾ ಮತ್ತು ದೆಹಲಿಯಲ್ಲಿ ಲಸಿಕೆ ಕೊರತೆ ತೀವ್ರವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.








