ದೇಶದಲ್ಲಿ ಲಾಕ್ ಡೌನ್ ಮೇ 31 ರವರೆಗೂ ಮುಂದುವರೆದಿದೆ. ಲಾಕ್ ಡೌನ್ 4.0 ವಿಸ್ತರಣೆ ಬಳಿಕ ಕೇಂದ್ರ ಸರ್ಕಾರ ಕೆಲ ನಿರ್ಧಾರಗಳನ್ನು ರಾಜ್ಯಗಳ ಅನುಕೂಲತೆಗೆ ತಕ್ಕಂತೆ ತೆಗೆದುಕೊಳ್ಳಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು 11 ಗಂಟೆಗೆ ಹಿರಿಯ ಸಚಿವರು ಮತ್ತು ಉನ್ನತ ಅಧಿಕಾರಗಳ ಮಹತ್ವದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸರ್ಕಾರಿ ಸಾರಿಗೆ ಬಸ್ಸುಗಳ ಸಂಚಾರ ಪುನರ್ ಪ್ರಾರಂಭದ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಂತರ ರಾಜ್ಯ ಬಸ್ ಸಂಚಾರ ಪ್ರಾರಂಭಿಸುವ ಬಗ್ಗೆ ರಾಜ್ಯ ಸರ್ಕಾರಗಳು ಮಾತುಕತೆ ನಡೆಸಿ ತೀರ್ಮಾನಕ್ಕೆ ಬರಬಹುದು. ಜೊತೆಗೆ ರಾಜ್ಯದೊಳಗೆ ಬಸ್ ಸಂಚಾರ ಆರಂಭಿಸಲು ಅವಕಾಶ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ನೀಡಿದೆ. ಹಾಗಾಗಿ ಈ ಸಭೆ ಸಾಕಷ್ಟು ಮಹತ್ವ ಪಡೆದಿದೆ. ಜೊತೆಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.
‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...








