ಗುಡ್ ನ್ಯೂಸ್ : ಕೇಂದ್ರದಿಂದ ರಾಜ್ಯಕ್ಕೆ ನೆರೆ ಪರಿಹಾರ ಬಿಡುಗಡೆ
ನವದೆಹಲಿ : ಪ್ರವಾಹ ಹೊಡೆತಕ್ಕೆ ಸಿಲುಕಿ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಂಚ ರಿಲೀಫ್ ನೀಡಿದ್ದು, ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಡಿ 577.84 ಕೋಟಿ ಮುಂಗಡ ಪರಿಹಾರ ಮಂಜೂರು ಮಾಡಿದೆ.
ಭಾರೀ ಮಳೆಯಿಂದಾಗಿ ಪ್ರವಾಹದಿಂದಾಗಿ ರಾಜ್ಯದಲ್ಲಿ ಸುಮಾರು 24,941 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಿ, ರಾಜ್ಯ ಸರ್ಕಾರ 10 ಸಾವಿರ ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು.
ಇದಕ್ಕೆ ಸ್ಪಂದಿಸಿ ಇದೀಗ ಕೇಂದ್ರ ಸರ್ಕಾರ ಮುಂಗಡವಾಗಿ ಎನ್ ಡಿಆರ್ ನಿಧಿಯಿಂದ 577 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಭೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಕರ್ನಾಟಕ ಸೇರಿ 6 ರಾಜ್ಯಗಳಿಗೆ ಒಟ್ಟು 4,382 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ.
‘ಅಕ್ಷರ ಮಾಂತ್ರಿಕ’ ರವಿ ಬೆಳಗೆರೆ ಅವರು ಬರೆದಿರುವ ಕೃತಿಗಳು..!
ಉಳಿದಂತೆ ಕಳೆದ ಮೇ ತಿಂಗಳಲ್ಲಿ ಬೀಸಿದ್ದ ಅಂಪನ್ ಚಂಡಮಾರುತದಿಂದ ತತ್ತರಿಸಿರುವ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಿಗೆ ಕ್ರಮವಾಗಿ 2707.77 ಹಾಗೂ 128.33 ಕೋಟಿ ಒದಗಿಸಿದೆ.
ಹಾಗೇ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಮಹಾರಾಷ್ಟ್ರ, ಸಿಕ್ಕಿಂ ರಾಜ್ಯಗಳಿಗೂ ಪರಿಹಾರ ಮಂಜೂರು ಮಾಡಲಾಗಿದ್ದು, ಎಲ್ಲ ರಾಜ್ಯಗಳಿಗೂ ಸೇರಿ ಒಟ್ಟು 4381.88 ಕೋಟಿ ರೂ. ಒದಗಿಸಲಾಗುತ್ತಿದೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel