ಚಾಮರಾಜನಗರ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಚಾಮರಾಜನಗರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ್ದು, ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ರೈತರಿಗೆ ಮಾರಕವಾಗಿರುವ ಕಾಯ್ದೆ ತರಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಿವೆ ಎಂದು ಆರೋಪಿಸಿ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಇದೇ ವೇಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗಗ್ರಹಿಸಿದ್ದಾರೆ.
GOOD NEWS: ರಾಜ್ಯ ಸರ್ಕಾರದ ‘ಗುತ್ತಿಗೆ ಸಿಬ್ಬಂದಿ’ಗಳಿಗೆ ಸಿಹಿಸುದ್ದಿ: 7ನೇ ವೇತನ ಆಯೋಗದ ಶಿಫಾರಸು ‘ಸಂಚಿತ ವೇತನ ಪರಿಷ್ಕರಣೆ’ ಯಾರಿಗೆ ಪ್ರಯೋಜನ..?
ಪ್ರಸ್ತುತ ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು, 2024ನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ,ಈ ಸಂಬಂಧ ನಡವಳಿಯನ್ನು...