ನವದೆಹಲಿ : ಸರಕು ಮತ್ತು ಸೇವಾ ತೆರಿಗೆ ( ಜಿ.ಎಸ್.ಟಿ) ಕಾಯಿದೆ ಪ್ರಕಾರ ರಾಜ್ಯ ಸರ್ಕಾರಕ್ಕೆ ಆದಾಯ ನಷ್ಟ ಪರಿಹಾರ ವಾಗಿ 43,141,340,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಡಿಸೆಂಬರ್ 2019ರಿಂದ ಫೆಬ್ರವರಿ 2020ವರೆಗಿನ ಅವಧಿಯಲ್ಲಿ ರಾಜ್ಯಕ್ಕೆ ಆಗಿರುವ ಆದಾಯ ನಷ್ಟಕ್ಕೆ ಪರಿಹಾರವಾಗಿ 43,141,340,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರದ ಈ ನಡೆಯನ್ನು ಸ್ವಾಗತಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯ ಧನ್ಯವಾದಗಳ ತಿಳಿಸಿದ್ದಾರೆ.








