ಭಾರತೀಯ ಸೇನೆಯಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಸರ್ಕಾರದ ಈ ಆದೇಶದಿಂದ ಸೈನ್ಯದಲ್ಲಿನ ಮಹಿಳೆಯರಿಗೆ ದೊಡ್ಡ ಹುದ್ದೆಗಳನ್ನು ನಿರ್ವಹಿಸುವ ಅವಕಾಶ ಕಲ್ಪಿಸಿಕೊಡುವ ಜೊತೆಗೆ ಮಹಿಳಾ ಸಬಲೀಕರಣಕ್ಕೂ ದಾರಿದೀಪವಾಗಲಿದೆ ಎಂದು ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ಅವರು ತಿಳಿಸಿದ್ದಾರೆ.
ಭಾರತೀಯ ಸೇನೆಯ ಎಲ್ಲಾ 10 ವಿಭಾಗಗಳ ಎಸ್‌ಎಸ್‌ಸಿ ಮಹಿಳಾ ಅಧಿಕಾರಿಗಳ ಶಾಶ್ವತ ಆಯೋಗಕ್ಕೆ ಅನುದಾನ ನಿರ್ದಿಷ್ಟಪಡಿಸುವಂತೆ ಕೇಂದ್ರ ನಿರ್ದೇಶಿಸಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಈ ಹಿಂದೆ ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೂ ಕಮಾಂಡರ್ ಸ್ಥಾನ ಕೊಡಬೇಕು. ಅವರಿಗೆ ಶಾಶ್ವತ ಆಯೋಗ ಸ್ಥಾಪಿಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಅದರಂತೆ ಇದೀಗ ಆಯೋಗ ಸ್ಥಾಪನೆಗೆ ಕೇಂದ್ರ ಆದೇಶ ಹೊರಡಿಸಿದೆ.








