ಕೊರೊನಾ ಹೆಚ್ಚಳ : ರಾಜ್ಯಕ್ಕೆ ಕೇಂದ್ರದಿಂದ ಆರೋಗ್ಯ ತಂಡ

1 min read
Coronavirus new COVID-19 cases in single day karnataka saaksha tv

ಕೊರೊನಾ ಹೆಚ್ಚಳ : ರಾಜ್ಯಕ್ಕೆ ಕೇಂದ್ರದಿಂದ ಆರೋಗ್ಯ ತಂಡ central-health-teams-to karnataka saaksha tv

ನವದೆಹಲಿ : ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಬುಧವಾರ ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಈ ಮಧ್ಯೆ ಕರ್ನಾಟಕದಲ್ಲಿ ಸೋಂಕು ಹೆಚ್ಚುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಕಳವಳ ವ್ಯಕ್ತಪಡಿಸಿದೆ.

ಇಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸುದ್ದಿಗೋಷ್ಠಿ ನಡೆಸಿದರು.

central-health-teams-to karnataka saaksha tv

ಈ ವೇಳೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಉತ್ತರ ಪ್ರದೇಶ ರಾಜ್ಯದಲ್ಲಿ ಸೋಂಕು ಹೆಚ್ಚಾಗುತ್ತಿರುವುದು ಕಳವಳಿಕಾರಿಯಾಗಿದೆ.

ಈ ರಾಜ್ಯಗಳಿಗೆ ಕೇಂದ್ರದಿಂದ ಆರೋಗ್ಯ ತಂಡಗಳನ್ನು ಕಳುಹಿಸಲಾಗಿದೆ ಎಂದು ತಿಳಿಸಿದರು.

ಅತಿ ಹೆಚ್ಚು ಕೋವಿಡ್‌ ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ಉತ್ತರ ಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಗುಜರಾತ್‌, ಒಡಿಶಾ ಹಾಗೂ ರಾಜಸ್ಥಾನ ಅಗ್ರ 10 ರಾಜ್ಯಗಳಾಗಿವೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd