ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿಯವರಿಗೆ ಕರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಬಗ್ಗೆ ಖುದ್ದು ಕೇಂದ್ರ ಸಚಿವ ಸುರೇಶ್ ಅಂಗಡಿಯವರೇ ಟ್ವೀಟ್ ಮಾಡಿದ್ದು ನಾನು ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಯಾರೂ ಕೂಡ ಆತಂಕ ಪಡಬೇಕಾಗಿಲ್ಲ ಶೀಘ್ರವಾಗಿ ಗುಣಮುಖರಾಗಿ ಬರುತ್ತೇನೆ ಎಂದು ತಿಳಿಸಿದ್ದಾರೆ. ಅಲ್ಲದೇ ಇತ್ತೀಚೆಗೆ ನನ್ನ ಸಂಪಕರ್ಕ್ಕೆ ಬಂದಿದ್ದವರು ಕೊರೊನಾ ಪರೀಕ್ಷೆಗೆ ಒಳಪಡಿ ಎಂದು ಕೇಂದ್ರ ಸಚಿವರು ವಿನಂತಿಸಿಕೊಂಡಿದ್ದಾರೆ.
ಇನ್ನೂ ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ಸಿದ್ಧಾರೂಢ ರೈಲು ನಿಲ್ದಾಣಕ್ಕೆ ನಾಮಕರಣ ಸಮಾರಂಭದ ಕುರಿತು ಮಾತನಾಡಿ ಸಂತಸ ವ್ಯಕ್ತಪಡಿಸಿದ್ದ ಕೇಂದ್ರ ಸಚಿವರು ದೆಹಲಿಗೆ ಪ್ರಯಾಣ ಬೆಳಸುತ್ತಿದ್ದಂತೆಯೇ ಕರೋನಾ ಸೋಂಕು ತಗುಲಿರುವುದು ದೃಢವಾಗಿದೆ.








