ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಲಿದೆ ಕೇಂದ್ರ ತಂಡ…
ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಅಂತರ್ ಸಚಿವಾಲಯದ ಕೇಂದ್ರ ತಂಡವು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳನ್ನು ಭೇಟಿ ಮಾಡಿತು.
ಜುಲೈ ಮತ್ತು ಆಗಸ್ಟ್ ನಲ್ಲಿ ಮಳೆ ಮತ್ತು ಪ್ರವಾಹದಿಂದ ರಾಜ್ಯವು ಅನುಭವಿಸಿದ ಹಾನಿ ಮತ್ತು ಎನ್‌ಡಿಆರ್‌ಎಫ್ ಅಡಿಯಲ್ಲಿ ಪರಿಹಾರ ಕೋರಿದ ಬಗ್ಗೆ ತಂಡಕ್ಕೆ ವಿವರಿಸಲಾಯಿತು. ಕೇಂದ್ರ ಮೌಲ್ಯಮಾಪನ ತಂಡವು ಸೆಪ್ಟೆಂಬರ್ 9 ರವರೆಗೆ ಮೂರು ದಿನಗಳ ಕಾಲ ವಿಪತ್ತು ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ.
ಮೂರು ತಂಡಗಳಲ್ಲಿ ಒಂದು ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಎರಡನೇ ತಂಡ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸ್ಥಳ ಪರಿಶೀಲನೆಗೆ ಮುಂದಾಗಿದೆ. ಮೂರನೇ ತಂಡ ಹಾಸನ, ಚಿಕ್ಕಮಗಳೂರು ಮತ್ತು ಚಿತ್ರದುರ್ಗಕ್ಕೆ ಭೇಟಿ ನೀಡಲಿದೆ.
ಕರ್ನಾಟಕವು ಮಳೆಯಿಂದ 7,647.13 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದೆ ಎಂದು ಅಂದಾಜಿಸಿದೆ. ಜೀವಹಾನಿ ಕನಿಷ್ಠ 96 ವ್ಯಕ್ತಿಗಳು; 5.81 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದೆ. NDRF ಮಾರ್ಗಸೂಚಿಗಳ ಪ್ರಕಾರ, ರಾಜ್ಯವು ಕೇಂದ್ರ ಸರ್ಕಾರದಿಂದ 1012 ಕೋಟಿ ರೂಪಾಯಿ ಪರಿಹಾರವನ್ನು ಕೋರಿದೆ.