ಬೆಂಗಳೂರಲ್ಲಿ ಶತಕ ದಾಟಿದ ಮೈಕ್ರೋ ಕಂಟೈನ್ಮೆಂಟ್ ಝೋನ್‍ಗಳು
ಬೆಂಗಳೂರು : ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.
ರಾಜ್ಯದಲ್ಲೂ ಕೂಡ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಳಿತ ಕಾಣುತ್ತಿವೆ.
ಆದ್ರೆ ಬೆಂಗಳೂರು ನಗರದಲ್ಲಿ ಮಾತ್ರ ಕಳೆದ ಕೆಲ ದಿನಗಳಿಂದ ಸೋಂಕು ಪ್ರಕರಣಗಳು ಏರಿಕೆಯತ್ತ ಮುಖ ಮಾಡಿವೆ.
ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಹತ್ತು ದಿನದಿಂದ ಹತ್ತು ವಾರ್ಡ್‍ಗಳಲ್ಲಿ ಸೋಂಕು ಏರಿಕೆಯಾಗುತ್ತಿದೆ. ಇದರ ಜೊತೆಗೆ ಅಪಾರ್ಟ್‍ಮೆಂಟ್‍ಗಳಲ್ಲಿ ಮತ್ತೊಮ್ಮೆ ಕೊರೊನಾ ಭೀಕರವಾಗಿ ಸ್ಫೋಟಗೊಳ್ಳುತ್ತಿದೆ.
ಮುಖ್ಯವಾಗಿ ನಗರದಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್‍ಗಳು ಶತಕ ದಾಟುತ್ತಿದ್ದು, ಬೊಮ್ಮನಹಳ್ಳಿ ವಲಯದಲ್ಲಿ ಹೆಚ್ಚು ಕಂಟೈನ್ಮೆಂಟ್ ಪ್ರದೇಶಗಳನ್ನು ಗುರುತಿಸಲಾಗಿದೆ.
ನಗರದ ಏಂಟು ವಲಯಗಳಲ್ಲಿ ನೂರಕ್ಕೂ ಹೆಚ್ಚು ಕಂಟೈನ್ಮೆಂಟ್ ಜೋನ್ ಗಳನ್ನು ಗುರುತಿಸಲಾಗಿದೆ.
ಮಹಾದೇವಪುರ ಭಾಗದಲ್ಲಿ 29, ಬೊಮ್ಮನಹಳ್ಳಿ ಭಾಗದಲ್ಲಿ 27, ಬೆಂಗಳೂರು ಪೂರ್ವ ಭಾಗದಲ್ಲಿ 19, ರಾಜರಾಜೇಶ್ವರಿ ನಗರ ಭಾಗದಲ್ಲಿ 8,
ಯಲಹಂಕ ವ್ಯಾಪ್ತಿಯಲ್ಲಿ 6, ಬೆಂಗಳೂರು ಪಶ್ಚಿಮ ವ್ಯಾಪ್ತಿಯಲ್ಲಿ 3, ಬೆಂಗಳೂರು ದಕ್ಷಿಣ ಭಾಗದಲ್ಲಿ 4, ದಾಸರಹಳ್ಳಿ ಭಾಗದಲ್ಲಿ 5 ಕಂಟೈನ್ಮೆಂಟ್ ಜೋನ್ ಗಳನ್ನು ಗುರುತಿಸಲಾಗಿದೆ.