CET Exam 2023 : ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ CET ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023-24 ನೇ ಸಾಲಿನ ವಿವಿಧ ವೃತ್ತಿ ಪರ ಕೋರ್ಸ್ಗಳ ಪ್ರವೇಶಾತಿಗೆ ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ದಿನಾಂಕವನ್ನು ಪ್ರಕಟಿಸಿದೆ. ಮೇ 20 ಮತ್ತು 21, 2023 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಗಳನ್ನ ಮೇ 22 ರಂದು ನಡೆಸಲು ತಿರ್ಮಾನಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ಪಿಯುಸಿ ತೇರ್ಗಡೆಯ ನಂತರ ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಕೋರ್ಸ್ಗಳಿಗೆ ಪ್ರವೇಶಾತಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಬರೆಯುವುದು ಕಡ್ಡಾಯವಾಗಿದೆ. ಈ ಪರೀಕ್ಷೆಯ ನಂತರ ಮೆರಿಟ್ ಆಧಾರದ ಮೇಲೆ ಕೋರ್ಸ್ಗಳಿಗೆ ಕಾಲೇಜುಗಳಲ್ಲಿ ಸೀಟು ಹಂಚಿಕೆ ಮಾಡಲಾಗುತ್ತದೆ.
ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಮನಸ್ಥಿತಿಯಲ್ಲಿರುವ ಕಾರಣ, ಪರೀಕ್ಷೆ ಮುಕ್ತಾಯವಾದ ನಂತರ ಅಂದರೆ ಮಾರ್ಚ್ ಅಂತ್ಯಕ್ಕೆ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಲಾಗುತ್ತಿದೆ.
CET Exam 2023 : CET Entrance Exam Date Announced for Professional Course Admission…