ವಿದ್ಯಾರ್ಥಿಗಳಿಗೆ CET ಪರೀಕ್ಷೆ ಕುರಿತು ಮಾಹಿತಿ
ನೀಟ್ ಮಾದರಿಯಲ್ಲಿ ಸಿಇಟಿ ಪರೀಕ್ಷೆ
ಪರೀಕ್ಷಾ ಕೇಂದ್ರಗಳ ಬಳಿ ಜಾಮರ್
ಮೆಟಲ್ ಡಿಡೆಕ್ಟರ್ ಅಳವಡಿಕೆಗೆ ಚಿಂತನೆ
ಜೂ.16,17 ಮತ್ತು 18 ರಂದು ಸಿಇಟಿ ಪರೀಕ್ಷೆ
ಬೆಂಗಳೂರು : ರಾಜ್ಯದಲ್ಲಿ ಜೂನ್ 16,17 ಮತ್ತು 18 ರಂದು ಸಿಇಟಿ ಪರೀಕ್ಷೆ ನಡೆಯಲಿದೆ.
ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನೀಟ್ ಪರೀಕ್ಷೆ ಮಾದರಿಯಲ್ಲಿ ಸಿಇಟಿ ಎಕ್ಸಾಂ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಈ ಬಾರಿ ಮಾಂಗಲ್ಯ ಸರ, ಮೂಗುತಿ, ಕಿವಿಯೋಲೆ, ಸರ, ಬಳೆ ಧರಿಸಿ ಬರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆ ಬರೆಯುವಾಗ ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ.
ಇದರ ಜೊತೆಗೆ ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಲು ನಿರ್ಧಾರಿಸಲಾಗಿದೆ.
ಮೆಟಲ್ ಡಿಡೆಕ್ಟರ್ ಅಳವಡಿಸಬೇಕು ಎಂದು ಕೆಇಎ ಬೋರ್ಡ್ ಚಿಂತನೆ ನಡೆಸಿದೆ.
ಅಂದಹಾಗೆ ಈ ಬಾರಿ ಒಟ್ಟು 2.11 ಲಕ್ಷ ಮಂದಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಣಿ ಮಾಡಿಕೊಂಡಿದ್ದಾರೆ.
ಈ ಪೈಕಿ 1.4 ಲಕ್ಷ ಪುರುಷ ವಿದ್ಯಾರ್ಥಿಗಳಿದ್ದು, 1.7 ಲಕ್ಷ ಮಹಿಳಾ ಅಭ್ಯರ್ಥಿಗಳಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ವಿಧೀ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.
ಮುಖ್ಯವಾಗಿ ಸಿಇಟಿ ಪರೀಕ್ಷೆ ಬರೆಯುವವರೂ ಹಿಜಾಬ್ ಧರಿಸುವಂತಿಲ್ಲ.
ಎಸ್ ಎಸ್ ಎಲ್ ಮತ್ತು ದ್ವಿತೀಯ ಪಿಯುಸಿ ಮಾದರಿಯಲ್ಲೇ ಸಿಇಟಿ ಪರೀಕ್ಷೆಯನ್ನೂ ನಡೆಯಲಿದೆ.
ಈ ಸಂಬಂಧ ಸರ್ಕಾರ ಹಾಗೂ ಹೈಕೋರ್ಟ್ ಆದೇಶ ಪಾಲನೆಗೆ ಕೆಇಎ ಮುಂದಾಗಿದೆ.
CET exam KEA decides to conduct CET on the lines of NEET says hijab not allowed