ಬೆಂಗಳೂರು: ನಾಳೆಯಿಂದ ವೃತ್ತಿಪರ ಕೋರ್ಸ್‍ಗಳಿಗೆ ಸಿಇಟಿ(ಸಾಮಾನ್ಯ ಪ್ರವೇಶ) ಪರೀಕ್ಷೆ ಅರಂಭವಾಗಲಿದೆ. ಇಂಜಿನಿಯರಿಂಗ್
ಹಾಗೂ ವೃತ್ತಿಪರ ಕೋರ್ಸುಗಳಿಗೆ ನಾಳೆಯಿಂದ ಮೂರು ದಿನಗಳ ಕಾಲ ಪರೀಕ್ಷೆ ನಡೆಯಲಿದೆ. ಆಗಸ್ಟ್ 1ರಂದು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಈ ನಡುವೆ, ಸಿಇಟಿ ಪರೀಕ್ಷೆಯನ್ನು ಮುಂದೂಡಬೇಕೆಂದು ಸಲ್ಲಿಸಿದ್ದ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ನಿಗದಿಯಂತೆ ಜು.30, 31ರಂದು ಪರೀಕ್ಷೆ ನಡೆಸಲು ಸೂಚನೆ ನೀಡಿದೆ.
ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಬೇಕು. ಕಂಟೈನ್‍ಮೆಂಟ್ ಪ್ರದೇಶದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆರಳದಂತೆ ಅಡ್ಡಿಪಡಿಸಬಾರದು. ಪರೀಕ್ಷೆ ಬರೆಯುವ ಯಾವೊಬ್ಬ ವಿದ್ಯಾರ್ಥಿಗೂ ಅವಕಾಶದಿಂದ ವಂಚಿತರಾಗಬಾರದು ಎಂದು ನ್ಯಾಯಮೂರ್ತಿ ಅರವಿಂದ ಕುಮಾರ್ ಹಾಗೂ ನ್ಯಾ ಎಂ.ಐ ಅರುಣ್ ಅವರಿದ್ದ ದ್ವಿಸದಸ್ಯ ಪೀಠ ಸೂಚನೆ ನೀಡಿದೆ.
ಸಿಇಟಿ ಪರೀಕ್ಷೆ ನಿಗದಿಯಂತೆ ನಾಳೆ ನಡೆಯಲಿದ್ದು, 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲಿಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಹಾಗೂ ಸ್ಯಾನಿಟೈಸರ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಎಂದು ಹೇಳಿದ್ದಾರೆ.
ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಮಣಿದ ಸರ್ಕಾರ : ಸಮಿತಿ ರಚನೆಗೆ ಒಪ್ಪಿಗೆ – ಆರ್. ಆಶೋಕ್
ವಕ್ಫ್ ಮಂಡಳಿ ಹಿಂದೂಗಳು ಮತ್ತು ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದೇನೆ. ಈ ಹೋರಾಟದಲ್ಲಿ ಬಿಜೆಪಿಗೆ ತಕ್ಕ ಮಟ್ಟಿನ ಜಯ ದೊರಕಿದೆ....