ಬೆಂಗಳೂರು : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರು ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
ಜುಲೈ 30 ರಿಮದ ಆಗಸ್ಟ್ 1 ರವರೆಗೆ ಸಿಇಟಿ ಪರೀಕ್ಷೆ ನಡೆದಿತ್ತು. 1,94,419 ವಿದ್ಯಾರ್ಥಿಗಳು ಪರೀಕ್ಷೆ ನೋಂದಣೆ ಮಾಡಿದ್ದರು. ಇದರಲ್ಲಿ 1,74,345 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಂಜಿನಿಯರಿಂಗ್ ನಲ್ಲಿ 1,53,417 ವಿದ್ಯಾರ್ಥಿಗಳು, ಕೃಷಿಯಲ್ಲಿ 175345 ವಿದ್ಯಾರ್ಥಿಗಳು , ಪಶುವೈದ್ಯಕೀಯ 12966 ವಿದ್ಯಾರ್ಥಿಗಳು, ಯೋಗ ಮತ್ತು ನ್ಯಾಚೂರೋಪಥಿ 129611 ಹಾಗೂ ಡಿ ಮತ್ತು ಬಿ ಫಾರ್ಮಾ ಕೋರ್ಸ್ ನಲ್ಲಿ 155552 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದಾರೆ.
ಸಿಇಟಿ ಫಲಿತಾಂಶದ ಆಧಾರದಲ್ಲಿ ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಸರ್ಕಾರಿ ಕೋಟಾ ಸೀಟು ಹಂಚಿಕೆಯಾಗಲಿದೆ.
ಕರ್ನಾಟಕ ಪರೀಕ್ಷಾ ಮಂಡಳಿ KCET 2020 ಫಲಿತಾಂಶವನ್ನು KEA ಅಧಿಕೃತ ವೆಬ್ಸೈಟ್ cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಿದೆ.