CFTRI Recruitment 2025 : ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇದರಲ್ಲಿ ಅಗತ್ಯ ಇರುವ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ ಹಾಗೂ ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್, ಜೂನಿಯರ್ ಸ್ಟೆನೋಗ್ರಾಫರ್.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಮೈಸೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ಹುದ್ದೆಗಳ ಸಂಖ್ಯೆ
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ 10
ಜೂನಿಯರ್ ಸ್ಟೆನೋಗ್ರಾಫರ್ 06
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : 10+2 ಅಥವಾ ತತ್ಸಮಾನ ಅರ್ಹತೆ ಜೊತೆಗೆ ಹುದ್ದೆಗೆ ನಿಗದಿಪಡಿಸಿದ ವೇಗದಲ್ಲಿ ಇಂಗ್ಲಿಷ್ ಹಾಗೂ ಹಿಂದಿ ಟೈಪಿಂಗ್ ಜ್ಞಾನ ಹೊಂದಿರಬೇಕು.
ವಯೋಮಿತಿ : ದಿನಾಂಕ ಮೇ 07, 2025ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ – ಗರಿಷ್ಠ 28 ವರ್ಷ
• ಜೂನಿಯರ್ ಸ್ಟೆನೋಗ್ರಾಫರ್ – ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ವೇತನ :
ಹುದ್ದೆ ವೇತನ
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ 36,220
ಜೂನಿಯರ್ ಸ್ಟೆನೋಗ್ರಾಫರ್ 47,415
ಆಯ್ಕೆ ವಿಧಾನ : ಓ.ಎಂ.ಆರ್ ಬೇಸ್ಡ್ ಅಥವಾ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಟೈಪಿಂಗ್ ಟೆಸ್ಟ್/ ಸ್ಕಿಲ್ ಟೆಸ್ಟ್ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳು – ರೂ. 500
ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 07, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 07, 2025