ಪ್ರಸಿದ್ಧ ನೃತ್ಯ ಸಂಯೋಜಕಿ ಮತ್ತು ಕ್ರಿಕೆಟರ್ ಯಜುವೇಂದ್ರ ಚಾಹಲ್ ಪತ್ನಿ ಧನಶ್ರೀ ವರ್ಮಾ ಇನ್‌ಸ್ಟಾಗ್ರಾಂನಲ್ಲಿ ಮಾಡಿರುವ ಒಂದು ಪೋಸ್ಟ್ ಇದೀಗ ಭಾರೀ ಸಂಚಲನ ಮೂಡಿಸಿದೆ. ಮಹಿಳೆಯರನ್ನು ದೂಷಿಸುವುದು ಈಗ ಫ್ಯಾಷನ್ ಆಗಿಬಿಟ್ಟಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಮಾತುಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲವು ದಿನಗಳಿಂದ ಚಾಹಲ್ ಮತ್ತು ಧನಶ್ರೀ ವಿಚ್ಛೇದನ ಪಡೆದಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ, ಇತ್ತೀಚೆಗೆ ಯಜುವೇಂದ್ರ ಚಾಹಲ್ ಮತ್ತೊಬ್ಬ ಯುವತಿಯೊಂದಿಗೆ ಐಪಿಎಲ್ ಫೈನಲ್ ವೀಕ್ಷಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಇದರಿಂದಾಗಿ, ಸಾಮಾಜಿಕ ಜಾಲತಾಣದಲ್ಲಿ ಅವರ ವೈಯಕ್ತಿಕ ಜೀವನದ ಬಗ್ಗೆ ಜೋರಾಗಿ ಚರ್ಚೆಗಳು ನಡೆಯುತ್ತಿವೆ.
ಈ ವದಂತಿಗಳಿಗೆ ತಿರುಗೇಟು ನೀಡುವಂತೆ, ಧನಶ್ರೀ ತಮ್ಮ ಇನ್‌ಸ್ಟಾಗ್ರಾಂ ಹ್ಯಾಂಡಲ್‌ನಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ. ಇದರಿಂದ ಅವರ ಮತ್ತು ಚಾಹಲ್ ನಡುವಿನ ಸಂಬಂಧದ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಾಗಿದೆ. ಅಭಿಮಾನಿಗಳು ಈ ಪೋಸ್ಟ್ ಅನ್ನು ವಿಚ್ಛೇದನಕ್ಕೆ ಸಂಬಂಧಿಸಿದ್ದೆಂದು ಊಹಿಸಿದ್ದು, ಹಲವರು ಧನಶ್ರಿಗೆ ಬೆಂಬಲ ಸೂಚಿಸುತ್ತಿದ್ದರೆ, ಇನ್ನು ಕೆಲವರು ಇದು ಅವರ ವೈಯಕ್ತಿಕ ವಿಷಯ ಎಂದು ತಪ್ಪಿಸಿಕೊಳ್ಳುತ್ತಿದ್ದಾರೆ.