ವಿಶ್ವದ 135 ದೇಶಗಳಲ್ಲಿ ಡೆಲ್ಟಾ ರೂಪಾಂತರಿಯ ಅಟ್ಟಹಾಸ..! ವಾರದೊಳಗೆ 200 ಮಿಲಿಯನ್ ಗಡಿ ದಾಟುವ ಸಾಧ್ಯತೆ..!
ವಿಶ್ವದ 135 ದೇಶಗಳಲ್ಲಿ ಡೆಲ್ಟಾ ರೂಪಾಂತರಿ ಕೊರೊನಾ ವೈರಸ್ ಹಬ್ಬಿದ್ದು, ಅಟ್ಟಹಾಸ ಮುಂದುವರೆಸಿದೆ ಎಂದು ತಿಳಿಸಿರುವ ವಿಶ್ವಸಂಸ್ಥೆಯು ಮತ್ತೊಂದು ಆಘಾತಕಾರಿ ವಿಚಾರವನ್ನೂ ಬಹಿರಂಗಪಡಿಸಿದೆ.. ಮುಂದಿನ ಒಂದು ವಾರದೊಳಗೆ ಕೊರೊನಾ ಪೀಡಿತರ ಸಂಖ್ಯೆ 200 ಮಿಲಿಯನ್ ಗಡಿ ದಾಟುವ ಸಾಧ್ಯತೆ ಇದೆ ಎಂದು ವಿಶ್ವ ಸಂಸ್ಥೆ ಎಚ್ಚರಿಕೆ ನೀಡಿದೆ.
ಈಗಾಗಲೇ 132 ರಾಷ್ಟ್ರಗಳಲ್ಲಿ ಬೀಟಾ ರೂಪಾಂತರಿ ಹಾಗೂ 81 ದೇಶಗಳಲ್ಲಿ ಗಾಮಾ ರೂಪಾಂತರಿ ಸೋಂಕು ಪತ್ತೆಯಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದೇ ರೀತಿ 182 ದೇಶಗಳಲ್ಲಿ ಅಲ್ಫಾ ರೂಪಾಂತರಿ ಕಾಣಿಸಿಕೊಂಡಿದ್ದು, ಇದೀಗ 135 ರಾಷ್ಟ್ರಗಳು ಡೆಲ್ಟಾ ರೂಪಾಂತರ ಸೋಂಕಿಗೆ ತುತ್ತಾಗಿವೆ ಎಂದು ಹೇಳಲಾಗಿದೆ. ಕಳೆದ ಒಂದು ತಿಂಗಳಿನಿಂದ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಒಂದು ವಾರದಿಂದಿಚೇಗೆ 4 ಮಿಲಿಯನ್ ಮಂದಿ ಸೋಂಕಿಗೆ ಗುರಿಯಾಗಿದ್ದಾರೆ ಎಂದು ವರದಿಯಾಗಿದೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








