ಜಿ7 ಶೃಂಗಸಭೆಯಲ್ಲಿ ಚೀನಾ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ – ಚೀನಾ ಆಕ್ರೋಶ
ಇಂಗ್ಲೆಂಡ್ : ಜಿ7 ಶೃಂಗಸಭೆಯಲ್ಲಿ ಷಿನ್ ಜಿಯಾಂಗ್ ಮತ್ತು ಹಾಂಗ್‌ಕಾಂಗ್ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ವಿವಿಧ ರಾಷ್ಟ್ರಗಳ ನಾಯಕರು ಚೀನಾದ ವಿರುದ್ಧ ಆರೋಪಗಳನ್ನ ಮಾಡಿದ್ದಾರೆ.. ಆದ್ರೆ ಇದಕ್ಕೆ ಚೀನಾ ತೀವ್ರ ಅಸಮಾಧಾನಗೊಂಡಿದ್ದು, ಆಕ್ರೋಶ ಹೊರಹಾಕಿದೆ. ಈ ಕುರಿತು ಬ್ರಿಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಈ ರಾಷ್ಟ್ರಗಳು ಚೀನಾದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿವೆ ಎಂದು ಆರೋಪಿಸಿದೆ.
ಅಲ್ಲದೇ ಈ ಆರೋಪಗಳಲ್ಲಿ ಹುರುಳಿಲ್ಲ. ಷಿನ್ ಜಿಯಾಂಗ್ ಸಂಬಂಧಿಸಿದ ಬೆಳವಣಿಗೆಗಳನ್ನೇ ಲಾಭವನ್ನಾಗಿಸಿ ಕೊಳ್ಳುತ್ತಿರುವ ರಾಷ್ಟ್ರಗಳು, ಆ ಮೂಲಕ ಚೀನಾದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿವೆ. ಇದನ್ನು ನಾವು ದೃಢವಾಗಿ ವಿರೋಧಿಸುತ್ತೇವೆ ಎಂದು ತಿಳಿಸಿದ್ದಾರೆ. ಹಾಂಗ್‌ಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಪರ ಹೋರಾಡುವವರನ್ನು ಹಾಗೂ ಷಿನ್‌ಜಿಯಾಂಗ್ ಪ್ರದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ರಾಷ್ಟ್ರಗಳ ನಾಯಕರು ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








