‘ ಚೀನಾಗೆ ಭಾರತದ ಮೇಲೆ ಸೈಬರ್ ದಾಳಿ ನಡೆಸುವ ಸಾಮರ್ಥ್ಯವಿದೆ’..!

1 min read

‘ ಚೀನಾಗೆ ಭಾರತದ ಮೇಲೆ ಸೈಬರ್ ದಾಳಿ ನಡೆಸುವ ಸಾಮರ್ಥ್ಯವಿದೆ’..!

ನವದೆಹಲಿ : ಭಾರತದ ಮೇಲೆ ಸೈಬರ್ ದಾಳಿ ನಡೆಸುವ ಸಾಮರ್ಥ್ಯ ಚೀನಾಕ್ಕಿದೆ ಎಂದು ಹೇಳುವ ಮೂಲಕ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಅಚ್ಚರಿ ಮೂಡಿಸಿದ್ದಾರೆ. ಹೌದು..

ಚೀನಾದ ಸೈಬರ್ ದಾಳಿಯ ಸಾಮರ್ಥ್ಯವು ಭಾರತಕ್ಕೆ ಬಹುದೊಡ್ಡ ಬೆದರಿಕೆಯಾಗಿದೆ. ಭಾರತವು ಸೈಬರ್ ರಕ್ಷಣೆಯ ಕ್ಷೇತ್ರದತ್ತ ಹೆಚ್ಚು ಗಮನ ಹರಿಸಿದೆ. ಅಂತಹ ಬೆದರಿಕೆಗಳನ್ನು ಎದುರಿಸಲು ಆಕ್ರಮಣಕಾರಿ ಸೈಬರ್ ಸಾಮರ್ಥ್ಯಗಳನ್ನು ರೂಪಿಸುವ ಕೆಲಸ ಮಾಡುತ್ತಿದೆ ಎಂದಿದ್ದಾರೆ.

ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸಲು ಚೀನಾ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದು, ಇಷ್ಟು ಅನುದಾನ ಪೂರೈಸಲು ಅದಕ್ಕೆ ಸಾಮರ್ಥ್ಯವಿದೆ. ಹೀಗಾಗಿ ಅವರು ಈ ವಿಚಾರದಲ್ಲಿ ಖಂಡಿತವಾಗಿಯೂ ನಮಗಿಂತ ಮುಂದಿದ್ದಾರೆ. ನಾವು ಕೂಡ ಅವರೊಂದಿಗೆ ಸರಿಸಮನಾಗಿ ನಿಲ್ಲಲು ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಅಪ್ಪನಿಗೆ ಮುದ್ದು ಮಗಳು ಅಂತ ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ..!

ಫೋರ್ಬ್ಸ್ ಬಿಲಿಯನೇರ್ಸ್ ಪಟ್ಟಿ – ಟಾಪ್ 5 ನಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ….?

ಬಿಗ್ ಬಾಸ್  ನ ಮಾಜಿ ಸ್ಪರ್ಧಿ ಚೈತ್ರ ಕೊಟ್ಟೂರು ಆತ್ಮಹತ್ಯೆಗೆ ಯತ್ನ..!

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd