ದ್ವಿಪಕ್ಷೀಯ ವಿವಾದಗಳನ್ನು ಪರಿಹರಿಸಿಕೊಳ್ಳುವಲ್ಲಿ ಮೋದಿ, ಜಿನ್ ಪಿಂಗ್ ಸಮರ್ಥರು – ರಷ್ಯಾ ಅಧ್ಯಕ್ಷ ಪುಟಿನ್
ನವದೆಹಲಿ: ಭಾರತ ಹಾಗೂ ಚೀನಾ ನಡುವಿನ ದ್ವಿಪಕ್ಷೀಯ ಪರಿಹರಿಸಿಕೊಳ್ಳುವಲ್ಲಿ ಪ್ರಧಾನಿ ಮೋದಿ , ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಸಾಮರ್ಥರಿದ್ದಾರೆಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಭಿಪ್ರಾಯ ಪಟ್ಟಿದ್ದಾರೆ.
ದ್ವಿಪಕ್ಷೀಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಇಬ್ಬರೂ ಸಮರ್ಥರಿದ್ದು, ಜವಾಬ್ದಾರಿಯುತ ನಾಯಕರು ಎಂದು ಪುಟಿನ್ ಹೇಳಿದ್ದಾರೆ. ಇನ್ನೂ ಉಭಯ ದೇಶಗಳ ನಡುವಿನ ವಿಷಯಗಳಲ್ಲಿ “ಯಾವುದೇ ಹೊರಗಿನಶಕ್ತಿ” ಹಸ್ತಕ್ಷೇಪ ಮಾಡುವುದು ಅಗತ್ಯವಿಲ್ಲವೆಂದೂ ಇದೇ ವೇಳೆ ಪುಟಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ನೆರೆರಾಷ್ಟ್ರಗಳ ನಡುವೆ ಯಾವಾಗಲೂ ಬಹಳಷ್ಟು ಸಮಸ್ಯೆಗಳಿರುತ್ತದೆ. ಭಾರತದ ಪ್ರಧಾನಿ ಮತ್ತು ಚೀನಾ ಅಧ್ಯಕ್ಷರ ಬಗ್ಗೆ ನನಗೆ ತಿಳಿದಿದೆ. ಇವರು ಬಹಳ ಜವಾಬ್ದಾರಿಯುತ ವ್ಯಕ್ತಿಗಳು ಮತ್ತು ಅವರು ಒಬ್ಬರಿಗೊಬ್ಬರು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಾರೆ.ಅವರು ಎದುರಿಸಬಹುದಾದ ಯಾವುದೇ ಸಮಸ್ಯೆಗೆ ಅವರೇ ಪರಿಹಾರವನ್ನು ಹುಡುಕುತ್ತಾರೆ ಎಂಬ ವಿಶ್ವಾಸವಿದೆ. ಬೇರೆ ಯಾವುದೇ ಪ್ರಾದೇಶಿಕ ಶಕ್ತಿಗಳು ಅದರಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲಎಂಬುದು ಮುಖ್ಯ ಅಂಶ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








