ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ಜಾತಿ ಗಣತಿ ವರದಿಯನ್ನು ಇಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ್ದಾರೆ.
ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ. ಕಾಂತರಾಜ್ ವರದಿ ಸ್ವೀಕಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ಜಾತಿ ಗಣತಿ ವರದಿಯಲ್ಲಿ ಇರುವುದನ್ನು ನಾನು ನೋಡಿಲ್ಲ. ಕ್ಯಾಬಿನೆಟ್ ನಲ್ಲಿ ವರದಿ ಕುರತು ಚರ್ಚೆ ಮಾಡುತ್ತೇವೆ. ನಂತರ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಈ ಎಲ್ಲ 13 ಪ್ರತಿಗಳು ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ಈ ವರದಿ ಒಳಗೊಂಡಿದೆ.
154 ಕೋಟಿ ರೂ. ವೆಚ್ಚದಲ್ಲಿ ಈ ಜಾತಿ ಗಣತಿ ವರದಿ ಸಿದ್ಧಪಡಿಸಲಾಗಿದೆ.








