ಟ್ರಾನ್ಸ್ ಫಾರ್ಮರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚೈತನ್ಯ ನಿಧನ
ಬೆಂಗಳೂರು: ಬುಧವಾರ ಬೆಸ್ಕಾಂ ನಿರ್ಲಕ್ಷ್ಯದಿಂದ ಟ್ರಾನ್ಸ್ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವನ್ನಪ್ಪಿದ್ದಾರೆ.
ಚೈತನ್ಯ(19) ಮೃತ ದುರ್ದೈವಿ. ಘಟನೆಯಲ್ಲಿ ತೀರ್ವವಾಗಿ ಗಾಯಗೊಂಡಿದ್ದ ಚೈತನ್ಯ ಅವರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರಗೆ ದಾಖಲಿಸಿದ್ದರು. ಆದರೆ ತಡರಾತ್ರಿ 2:15 ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮರಣಹೊಂದಿದ್ದಾರೆ.
ನಡೆದಿದ್ದು: ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದ ಕಾರಣ ಬಟ್ಟೆ ಖರೀದಿಗೆ ಮಗಳೊಂದಿಗೆ ಉಲ್ಲಾಳ ಉಪನಗರಕ್ಕೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ. ಹಾಗೇ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜು, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದರು. ಆದರೆ ಚೈತನ್ಯ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬುಧವಾರ ಈ ಘಟನೆ ಸಂಬಂಧ ಶಿವರಾಜು ಸಂಬಂಧಿಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.