ಪತಿ ಹಾಗೂ ಮಾವನ ವಿರುದ್ಧವೇ ಕೇಸ್ ದಾಖಲಿಸಿದ ನಟಿ ಚೈತ್ರಾ
ಬ್ಯಾಂಕ್ ಖಾತೆ ದುರ್ಬಳಕೆ ಆರೋಪ
ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲು
ಗುರು ಶಿಷ್ಯ, ಶ್ರೀ ದಾನಮ್ಮ ದೇವಿ ಚಿತ್ರಗಳಲ್ಲಿ ನಟನೆ
ಅನುಮತಿಯಿಲ್ಲದೆ ಗೋಲ್ಡ್ ಲೋನ್ ಪಡೆದಿರುವ ಬಗ್ಗೆ ದೂರು
ಮೈಸೂರು : ಕನ್ನಡದ ಗುರು ಶಿಷ್ಯ, ಶ್ರೀ ದಾನಮ್ಮ ದೇವಿ ಚಿತ್ರಗಳಲ್ಲಿ ನಟಿಸಿರುವ ನಟಿ ಚೈತ್ರಾ ಬಿ ಪೋತರಾಜ್ ಅವರು ತಮ್ಮ ಪತಿ ಹಾಗೂ ಮಾವನ ವಿರುದ್ಧ ಬ್ಯಾಂಕ್ ಖಾತೆ ದುರ್ಬಳಕೆ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ನ ಅನುಮತಿಯಿಲ್ಲದೆ ಗೋಲ್ಡ್ ಲೋನ್ ಪಡೆಯಲಾಗಿದೆ ಎಂದು ಪತಿ ಬಾಲಾಜಿ ಪೋತರಾಜ್, ಮಾವ ಪೋತರಾಜ್ ವಿರುದ್ಧ ಚೈತ್ರಾ ದೂರು ನೀಡಿದ್ದಾರೆ. ಗೋಲ್ಡ್ ಲೋನ್ ಪಡೆಯುವ ವೇಳೆ ತನ್ನ ಸಹಿಯನ್ನು ನಕಲು ಮಾಡಲಾಗಿದೆ. ಈ ಅವ್ಯವಹಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಕೂಡ ಶಾಮೀಲಾಗಿದ್ದಾರೆ. ಪ್ರಕರಣ ಸಂಬಂಧ ತಮಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಿದ್ದಾರೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಪತಿಯ ವಿರುದ್ಧ ಈಗಾಗಲೇ ದೈಹಿಕ ಹಲ್ಲೆ ಆರೋಪದಡಿ ಕೇಸು ದಾಖಲಿಸಿದ್ದು, ನನ್ನ ಬ್ಯಾಂಕ್ ಖಾತೆ ದುರ್ಬಳಕೆ ಮಾಡಿಕೊಂಡಿರುವುದು ಗೊತ್ತಾಗಿ ಮತ್ತೆ ದೂರು ನೀಡುತ್ತಿದ್ದೇನೆ ಎಂದು ಪೊಲೀಸ್ ದೂರಿನಲ್ಲಿ ನಟಿ ಚೈತ್ರಾ ಉಲ್ಲೇಖಿಸಿದ್ದಾರೆ. ಜನವರಿ 2014 ಮತ್ತು ಮೇ 2022 ರ ನಡುವೆ ಈ ಘಟನೆಗಳು ನಡೆದಿವೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.