ಬೆಳಗಾವಿ: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ರಾಜ್ಯಕ್ಕೆ ಬಂದಿದೆ. ಸರ್ಕಾರ ನಿದ್ದೆಯಿಂದ ಎದ್ದು, ಕಾರ್ಯಪ್ರವೃತ್ತವಾಗಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಬಾಣಂತಿಯರು, ನವಜಾತ ಶಿಶುಗಳ ಸಾವಿನ ವಿಷಯದಲ್ಲಿ ರಾಜ್ಯಾದ್ಯಂತ ಗೊಂದಲದ ವಾತಾವರಣ ಇದೆ. ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ನೋಡುವಂತಾಗುತ್ತಿದೆ. ಈ ಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಂಡುಕೊಳ್ಳುವಾಗ ಬ್ಲಾಕ್ ಮಾಡಿದ ಕಳಪೆ ಔಷಧಿಗಳನ್ನು ಖರೀದಿಸಿದ್ದಾರೆ. ಅವುಗಳನ್ನು ಬಳಸಿದ್ದರಿಂದ ಅನೇಕ ಕಡೆ ಈ ರೀತಿಯ ದಾರುಣ ಘಟನೆಗಳು ನಡೆದಿವೆ ಎಂದು ಆರೋಪಿಸಿದ್ದಾರೆ.








