Challakere: ಒಂದೆ ಕುಟುಂಬದ ಮೂವರು ಮಹಿಳೆಯರು ನಿಗೂಢ ಸಾವು…..
ಒಂದೇ ಕುಟುಂಬದ ಮೂವರು ಮಹಿಳೆಯರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ವರದಿಯಾಗಿದೆ.
ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ನಿವಾಸಿ ತಿಪ್ಪಜ್ಜಿ (75), ಪುತ್ರಿಯರಾದ ಮಾರಕ್ಕ (45) ಹಾಗೂ ದ್ಯಾಮಕ್ಕ (43) ಮೃತಪಟ್ಟವರು. ಮೂವರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಬುಧವಾರ ರಾತ್ರಿಯಿಂದ ಗುರುವಾರ ಸಂಜೆಯಾದರೂ ಮನೆಯಿಂದ ಯಾರು ಹೊರಗೆ ಬರದೇ ಇದ್ದಾಗ ಅನುಮಾನಗೊಂಡ ಸ್ಥಳಿಯರು ಬಾಗಿಲು ಬಡಿದು ನೋಡಿದ್ದಾರೆ. ಒಳಗಿನಿಂದ ಪ್ರತಿಕ್ರಿಯೆ ಬರದೇ ಇದ್ದಾಗ ಕಿಟಕಿ ತೆರೆದು ನೋಡಿದಾಗ ಮಲಗಿರುವ ಸ್ಥತಿಯಲ್ಲಿರುವುದು ಗೊತ್ತಾಗಿದೆ ನಂತರ ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ.
ಪೊಲೀಸರು ಬಾಗಿಲು ಒಡೆದು ಪರಿಶೀಲಿಸಿದಾಗ ಮೂವರು ಮೃತಪಟ್ಟಿರುವುದು ಖಚಿತವಾಗಿದೆ.
ತಿಪ್ಪಜ್ಜಿ ಪುತ್ರ ದ್ಯಾಮಣ್ಣ (47) ಅನಾರೋಗ್ಯ ಸಮಸ್ಯೆಯಿಂದ ಕೆಲ ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು. ಪತಿ ಕೆಂಚಪ್ಪ ಕೂಡ ವರ್ಷದ ಹಿಂದೆ ಕೊನೆಯುಸಿರೆಳೆದಿದ್ದರು. ಮಾರಕ್ಕ ಮತ್ತು ದ್ಯಾಮಕ್ಕ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡು ತವರು ಸೇರಿದ್ದರು. ಇದರಿಂದ ಇಡೀ ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿತ್ತು ಎನ್ನಲಾಗಿದೆ. ಈಗಾಗಿ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Challakere: Three women of a family die mysteriously….
ಇದನ್ನೂ ಓದಿ – https://saakshatv.com/madhya-pradesh-1…us-car-collision/








