ರಾಯಚೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ.
ಈ ವೇಳೆ ದಂಪತಿ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ ಪಡೆದರು. ಗುರು ರಾಯರ ಮೂಲವೃಂದಾವನಕ್ಕೆ ಎನ್.ಚಲುವರಾಯಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದಂಪತಿಗೆ ಆಶಿರ್ವಚನ ನೀಡಿದರು. ಈ ವೇಳೆ ಶ್ರೀಗಳು ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಕೃಷಿ ಮೇಳಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ರಾಯರ ದರ್ಶನ ಪಡೆದಿದ್ದಾರೆ.