Chamarajanagar | ಮಲೆಮಹದೇಶ್ವರ ಬೆಟ್ಟದಲ್ಲಿ ಅಪಘಾತ
ಚಾಮರಾಜನಗರ : ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ ಮಾರ್ಗದ ನಡುವೆ ಎರಡು ಮಿನಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಭಾನುವಾರ ಸಂಜೆ ಈ ಘಟನೆ ನಡೆದಿದೆ.

ಹನೂರು ಕಡೆಯಿಂದ ಮಲೆಮಹದೇಶ್ವರಬೆಟ್ಟದತ್ತ ತೆರಳುತ್ತಿದ್ದ ಸಂಚರಿಸುವಾಗ ಈ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ಸಿನಲ್ಲಿದ್ದವರಿಗೆ ಗಂಭೀರವಾದ ಗಾಯಾಗಳಾಗಿದೆ.
ಅಪಘಾತ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಲ್ಲದೆ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಮಲೆಮಹದೇಶ್ವರಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ.