Chamarajanagar : ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸಾವು
ಚಾಮರಾಜನಗರ : ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆಯ ಹೊರವಲಯದಲ್ಲಿ ನಡೆದಿದೆ.
ಗುಂಡ್ಲುಪೇಟೆ ಪಟ್ಟಣದ ನಿವಾಸಿ ಕಲೀಂ ಪಾಷಾ(24) ಮೃತ ವ್ಯಕ್ತಿಯಾಗಿದ್ದಾನೆ.
ಗುಂಡ್ಲುಪೇಟೆ ಮಾರ್ಗವಾಗಿ ಹೆದ್ದಾರಿ ಮೂಲಕ ಹಂಗಳಕ್ಕೆ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪರಿಣಾಮ ಸ್ಥಳದಲ್ಲೇ ಆತ ಅಸುನೀಗಿದ್ದಾನೆ.
ಗುಂಡ್ಲುಪೇಟೆ ಠಾಣೆಯ ಪೊಲೀಸರು ದೌಡಾಯಿಸಿ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.