Chamarajanagar : ಮಲೆ ಮಹದೇಶ್ವರದಲ್ಲಿ ಬಸ್ ಪಲ್ಟಿ; 15 ಕ್ಕೂ ಹೆಚ್ಚು ಜನರಿಗೆ ಗಾಯ
ಗುಜರಾತ್ ನಿಂದ ಹೊರಟಿದ್ದ ಖಾಸಗಿ ಬಸ್ ತಮಿಳುನಾಡು ಪ್ರವಾಸ್ ಮುಗಿಸಿ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಸಮಯದಲ್ಲಿ ಅಪಘಾತಗೊಂಡು 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದ ಗುಜರಾತ್ ಪ್ರವಾಸಿಗರು ತಮಿಳುನಾಡು ರಾಜ್ಯದ ಪ್ರವಾಸ ಮುಗಿಸಿ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಬುಧವಾರ ಬೆಳಗ್ಗೆ ಪಾಲರ್ ಸಮೀಪದ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಿಂಬದಿಯಿಂದ ಕಂದಕಕ್ಕೆ ಉರುಳಿದೆ.
ತಕ್ಷಣ ಮಲೆ ಮಾದೇಶ್ವರ ಬೆಟ್ಟ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಗಾಯಗೊಂಡಿದ್ದ 15 ಜನರನ್ನು ಅಂಬುಲೆನ್ಸ್ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ.
ಬಸ್ ನಲ್ಲಿ 60ಕ್ಕೂ ಹೆಚ್ಚು ಜನರು ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ. ಉಳಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamarajanagar : Bus overturns at Male Mahadeshwar; More than 15 people were injured








