ಬಂಡೀಪುರ ಪರಿಸರ ಸೂಕ್ಷ್ಮ ವಲಯದಲ್ಲಿ ಪ್ರವಾಸಿಗರ ಮೋಜು ಮಸ್ತಿ…
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಯ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಕುಡಿದು ಮೋಜು ಮಸ್ತಿ ಮಾಡಿದ್ದಾರೆ.
ಕೆಲ ತಿಂಗಳ ಹಿಂದೆ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಹಿರೀಕೆರೆ ತುಂಬಿ ಕೋಡಿ ಬಿದ್ದಿತ್ತು. ಕೆರೆ ಅಭಯಾರಣ್ಯ ವ್ಯಾಪ್ತಿಗೆ ಬರುವ ಕಾರಣ ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಆದರೆ ಅಧಿಕಾರಿಗಳ ಕೃಪಕಟಾಕ್ಷದಿಂದ ಕೆಲವು ಮಂದಿ ತಮ್ಮ ವಾಹನದ ಸಮೇತ ಬೀಡುಬಿಟ್ಟು ಮಸ್ತಿಯಲ್ಲಿ ತೊಡಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೆರೆಯ ಕೋಡಿ ಸ್ಥಳದಲ್ಲಿ ಕುಳಿತು ಮದ್ಯ ಸೇವಿಸಿದ್ದಾರೆ.
ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಗೆ ಬರುವ ಹಿರೀಕೆರೆ ಸೂಕ್ಷ್ಮ ಪರಿಸರ ವಲಯವಾಗಿದ್ದರು ಮೋಜು ಮಸ್ತಿ ಮಾಡಲು ಅನುಮತಿ ನೀಡಿದವರು ಯಾರು? ಎಂಬ ಪ್ರಶ್ನೆ ಎದ್ದಿದೆ.
chamarajanagar: Tourists have fun in Bandipur eco-sensitive zone…








