ಚಾಮರಾಜನಗರ: ಕೇರಳದ ವೈನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ನದಿಗಳೆಲ್ಲಾ ಉಕ್ಕಿ ಹರಿಯುತ್ತಿವೆ. ಕೇರಳದಲ್ಲಿ ಸಂಭವಿಸಿದ ಪ್ರವಾಹದ ಹಿನ್ನೆಲೆ ಗಡಿ ಜಿಲ್ಲೆ ಚಾಮರಾಜನಗರ ಹಾಗೂ ಕೇರಳದ ನಡುವಿನ ಸಂಪರ್ಕ ಕಡಿತಗೊಂಡಿದೆ. ಕರ್ನಾಟಕ ಕೇರಳ ಗಡಿ ಭಾಗದಲ್ಲಿರುವ ಮೂಲೆ ಹೊಳೆ ಚೆಕ್ ಪೋಸ್ಟ್ ಬಂದ್ ಮಾಡಲಾಗಿದೆ. ಕೇರಳ ಕರ್ನಾಟಕ ಗಡಿ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆಯೇ ನದಿ ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ ಪ್ರವಾಹ ಕಡಿಮೆಯಾಗುವ ವರೆಗೂ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.








