Chamarajanagara | ಅಪರಿಚಿತ ಕಾರು ಡಿಕ್ಕಿ : ಇಬ್ಬರು ಸಾವು
ಚಾಮರಾಜನಗರ : ಬೈಕ್ ಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಸಗೊಲಿ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದ 30 ವರ್ಷದ ವೆಂಕಟೇಶ್ ಹಾಗೂ 50 ವರ್ಷದ ಕಾಂತಾಚಾರಿ ಎಂಬುವರು ಮೃತಪಟ್ಟಿದ್ದಾರೆ.

ಇವರು ಹಸಗೂಲಿ ಕಡೆಯಿಂದ ಆಲತ್ತೂರಿಗೆ ಬೈಕ್ನಲ್ಲಿ ತೆರಳುತ್ತಿದ್ದರು.
ಈ ವೇಳೆ ಅತೀ ವೇಗದಿಂದ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








