ಕೊರೊನಾ ಲಾಕ್ ಡೌನ್ – ಜನರಿಲ್ಲದೇ ಬಿಕೋ ಎನ್ನುತ್ತಿದೆ ಚಾಮರಾಜನಗರ
ಚಾಮರಾಜನಗರ : ದೇಶ ಹಾಗೂ ರಾಜ್ಯದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ.
ಮತ್ತೊಂದೆಡೆ ಪರಿಸ್ಥಿತಿ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.. ಲಾಕ್ ಡೌನ್ ಗೆ ಜನರೂ ಕೂಡ ಸ್ಫಂದಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಾದ್ಯಂತೆ ಲಾಕ್ ಡೌನ್ ಗೆ ಜನರು ಉಉತ್ತಮವಾಗಿ ಸಹಕರಿಸಿದ್ದು, ಸುಖಾಸುಮ್ಮನೆ ಹೊರಬಂದಿರುವುದು ತೀರಾ ಕಡಿಮೆ..
ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದು, ರಸ್ತೆಯಲ್ಲಿ ಬೆರಳೇಣಿಕೆಯಷ್ಟು ತಳ್ಳುಗಾಡಿಯಲ್ಲಿ ತರಕಾರಿ ಮಾರಾಟ ಮಾಡಿದ್ದಾರೆ. ಜನರು ಸಹ ರಸ್ತೆಗಿಳಿಯದೇ ಲಾಕ್ ಡೌನ್ ರೂಲ್ಸ್ ಫಾಲೋ ಮಾಡಿದ್ಧಾರೆ. ಜನರಿಲ್ಲದೇ ಎಲ್ಲಾ ರಸ್ತೆಗಳು ಬಿಕೋ ಎನ್ನುತ್ತಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








