ಕನ್ನಡ ಹಿರಿಯ ಸಾಹಿತಿ ಚಂಧ್ರಶೇಖರ್ ಪಾಟೀಲ್ ವಿಧಿವಶ
ಬೆಂಗಳೂರು : ಕನ್ನಡದ ಹಿರಿಯ ಸಾಹಿತಿ , ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕರಾದ ಚಂದ್ರಶೇಖರ ಪಾಟೀಲ್ ಅವರು ಇಂದು ವಿಧಿವಶರಾಗಿದ್ದಾರೆ… 82 ವರ್ಷದ ಅವರು ಧೀರ್ಘಕಾಲದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು..
ಹೀಗಾಗಿ ಕೋಣನಕುಂಟೆ ಕ್ರಾಸ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು.. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ 6:30ಕ್ಕೆ ಆಸ್ಪತ್ರೆಯಲ್ಲೇ ಕೊನೆಯುಸದಿರೆಳೆದಿದ್ದಾರೆ..
ಚಂಪಾ ಕಾವ್ಯನಾಮದ ಮೂಲಕ ಪ್ರಸಿದ್ಧರಾಗಿದ್ದ ಇವರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18ರಂದು ಜನಿಸಿದ್ದ ಚಂಪಾ ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೊಮ ಪಡೆದಿದ್ದರು.
1996-99ರ ಅವಧಿಗೆ ಚಂದ್ರಶೇಖರ ಪಾಟೀಲರನ್ನು ಕರ್ನಾಟಕ ಸರ್ಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿತ್ತು. 2004-08 ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಇವರು ಕಾರ್ಯನಿರ್ವಹಿಸಿದ್ದರು.
ಚಂಪಾ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ..
ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದು,
ಚಂಪಾ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿ ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಸಂತಾಪ ಸೂಚಿಸಿದ್ದು , ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್ ನಿಧನದಿಂದ ದುಃಖಿತನಾಗಿದ್ದೇನೆ. ಇವರ ಕುಟುಂಬ ಹಾಗೂ ಅಭಿಮಾನಿಗಳ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ..








