ಮುಂದಿನ ಒಂದು ದಿನ 8 ರಾಜ್ಯಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಇದು ಈ ಋತುವಿನ ಸರಾಸರಿ ತಾಪಮಾನಕ್ಕಿಂತ ಐದು ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಆಸ್ಸಾಂನಲ್ಲಿ ಹಗುರುವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಕಾರವಾರದಲ್ಲಿ 34.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.