ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸ್ವಲ್ಪ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರದಲ್ಲಿ ಮಳೆಯಾಗಿದ್ದು, ಮುಂದಿನ ಮೂರು ದಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ.








