ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯಾದ್ಯಂತ ಇಂದು ಮೋಡ ಕವಿದ ವಾತಾವರಣವಿದೆ. ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.
ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಮೇಲ್ಮೈ ಸುಳಿಗಾಳಿಯಿಂದಾಗಿ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.