ಚಂದನವನದ ಕುಳ್ಳ ಹಾಗೂ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದಾರೆ.
81 ವರ್ಷದ ಹಿರಿಯ ನಟ ದ್ವಾರಕೀಶ್ ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿ ಕೆಲಸ ಮಾಡಿದ್ದರು. ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ತಿಳಿಸಿದ್ದಾರೆ.
ದ್ವಾರಕೀಶ್ ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ದ್ವಾರಕೀಶ್ ಕನ್ನಡ ಚಿತ್ರರಂಗದ ಬಹುತೇಕ ದಿಗ್ಗಜರೊಂದಿಗೆ ನಟಿಸಿದ್ದಾರೆ. ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಈ ಮೊದಲು ಹಲವು ಬಾರಿ ವದಂತಿ ಹಬ್ಬಿತ್ತು. ಈ ಬಾರಿಯೂ ಸಾವಿನ ಸುದ್ದಿ ಫೇಕ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಈಗ ಅವರ ಕುಟುಂಬದ ಕಡೆಯಿಂದಲೇ ಇದಕ್ಕೆ ಸ್ಪಷ್ಟನೆ ಸಿಕ್ಕಿದೆ. ಸೋಮವಾರ ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ದೆ ಮಾಡಲು ಹೋಗಿದ್ದರು. ಆದರೆ, ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತವಾಗಿದೆ ಎಂದು ಅವರ ಪುತ್ರ ಹೇಳಿದ್ದಾರೆ.