ಚಂಡೀಗಢ ವಿಮಾನ ನಿಲ್ದಾಣ ಭಗತ್ ಸಿಂಗ್ ಹೆಸರು ಮರುನಾಮಕರಣ
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ 115ನೇ ಜನ್ಮ ದಿನಾಚರಣೆಯ ಶುಭ ಸಂದರ್ಭದಲ್ಲಿ ಚಂಡೀಗಢ ವಿಮಾನ ನಿಲ್ದಾಣದ ಹೆಸರನ್ನ ಶಹೀದ್ ಭಗತ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.
ಸಮಾರಂಭದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಮಾನ ನಿಲ್ದಾಣಕ್ಕೆ ಅಧಿಕೃತವಾಗಿ ನಾಮಕರಣ ಮಾಡಿದರು. ಕಾರ್ಯಕ್ರಮದಲ್ಲಿ ಪಂಜಾಬ್ ಮತ್ತು ಹರಿಯಾಣದ ರಾಜ್ಯಪಾಲರಾದ ಬನ್ವಾರಿಲಾಲ್ ಪುರೋಹಿತ್ ಮತ್ತು ಬಂಡಾರು ದತ್ತಾತ್ರಯ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಮತ್ತು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಸಹ ಭಾಗವಹಿಸಿದ್ದರು. ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್ (ನಿವೃತ್ತ) ಮತ್ತು ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಕೇಶ್ ರಂಜನ್ ಸಹಾಯ್ ಉಪಸ್ಥಿತರಿದ್ದರು.
ಆಗಸ್ಟ್‌ನಲ್ಲಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ನಡುವೆ ನಡೆದ ಸಭೆಯಲ್ಲಿ ವಿಮಾನ ನಿಲ್ದಾಣವನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.
Chandigarh airport renamed Shaheed Bhagat Singh International Airport








