Chandigarh | ವಿದ್ಯಾರ್ಥಿನಿಯರಿಂದ ಸಾಮೂಹಿಕ ಆತ್ಮಹತ್ಯೆ ಯತ್ನ!
ಮಹಿಳಾ ಹಾಸ್ಟೆಲ್ ನ ಬಾತ್ ರೂಮ್ ವಿಡಿಯೋ ವೈರಲ್
ಪಂಜಾಬ್ ನ ಮೊಹಾಲಿಯಲ್ಲಿರುವ ಚಂಡೀಗಡ ವಿವಿ
ರಾತ್ರೋರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರ ಪ್ರೊಟೆಸ್ಟ್
ಚಂಡೀಗಡ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟನೆ
ಚಂಡೀಗಡ : ಪಂಜಾಬ್ ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ಮಾನಗೇಡಿ ಕೃತ್ಯ ನಡೆದಿದೆ.
ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋವನ್ನು ಶಿಮ್ಲಾ ಮೂಲದ ವಿದ್ಯಾರ್ಥಿನಿಯೊಬ್ಬಳು ಶಿಮ್ಲಾದಲ್ಲಿ ವಾಸಿಸುವ ತನ್ನ ಗೆಳೆಯನೊಂದಿಗೆ ಹಂಚಿಕೊಂಡಿದ್ದಾಳೆ.
ಈ ವಿಡಿಯೋವನ್ನು ಆತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಈ ವಿಡಿಯೋವನ್ನು ನೋಡಿದ ಎಂಟು ವಿದ್ಯಾರ್ಥಿನಿಯರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ ಮಾಹಿತಿ ತಿಳಿದ ಇನ್ನುಳಿದ ವಿದ್ಯಾರ್ಥಿನಿಯರು ಕೂಡಲೇ ಆತ್ಮಹತ್ಯೆಗೆ ಯತ್ನಿಸಿ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಈ ಪೈಕಿ ಓರ್ವಳ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಈ ಕೃತ್ಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತ ಈ ಘಟನೆಯನ್ನು ಖಂಡತುಂಡವಾಗಿ ಖಂಡಿಸುತ್ತಿರುವ ವಿದ್ಯಾರ್ಥಿನಿಯರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕಾಗಿ ತರಲು ಸ್ಥಳಕ್ಕೆ ದೌಡಾಯಿಸಿದ ಪೊಲೀಸರ ಮೇಲೂ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.