ಚಂದ್ರಶೇಖರ್ ಗುರೂಜಿ ಹತ್ಯೆ – ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಿದ ಪೊಲೀಸರು…
ರಾಜ್ಯಾದ್ಯಂತ ತಲ್ಲಣ ಮೂಡಿಸಿದ್ದ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಹುಬ್ಬಳ್ಳಿ – ಧಾರವಾಡ ಪೊಲೀಸರು, ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಲೆಯಾದ 5 ಗಂಟೆಗಳಲ್ಲೇ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಆರೋಪಿಗಳಾದ ಮಹಾಂತೇಶ್ ಶಿರೂರ ಮತ್ತು ಮಂಜುನಾಥ ದುಮ್ಮವಾಡನನ್ನು ಬಂಧಿಸಿದ್ದಾರೆ. ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿದ್ದಾರೆ ಎಂಬ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.
ಗುರೂಜಿ ಅವರ ಆಪ್ತನಾಗಿದ್ದ ಮಹಾಂತೇಶ ಶಿರೂರ ಹಾಗೂ ಮಂಜುನಾಥ್ ದುಮ್ಮವಾಡ ಅವರನ್ನು ರಾಮದುರ್ಗದಲ್ಲಿ ಪೊಲೀಸರು ಬಂಧಿಸಿದ್ದು, ಮಹಾಂತೇಶನ ಪತ್ನಿ ವನಜಾಕ್ಷಿ ಈಗಾಗಲೇ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸರ ವಶದಲ್ಲಿದ್ದಾರೆ.
ರಸ್ತೆ ಮಧ್ಯೆ ಜೆಸಿಬಿಯಿಂದ ಆರೋಪಿಗಳಿದ್ದ ಕಾರನ್ನು ಅಡ್ಡಗಟ್ಟಿದ ಪೊಲೀಸರು ಆರೋಪಿಗಳು ಪ್ರತಿದಾಳಿ ನಡೆಸಬಹುದು ಎಂಬ ಮುನ್ನೆಚ್ಚರಿಕೆಯಿಂದ ಗನ್ ಪಾಯಿಂಟ್ ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಬ್ಬರು ಚಂದ್ರಶೇಖರ ಗುರೂಜಿ ಅವರಿಗೆ ಆಪ್ತರಾಗಿದ್ದು ಸರಳವಾಸ್ತು ಸಂಸ್ಥೆಯಲ್ಲಿ ಗುರೂಜಿ ಜೊತೆ ಕೆಲಸ ಮಾಡಿದ್ದರು ಎಂಬ ವಿಷಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.
Chandrasekhar Guruji’s murder – The police arrested the accused in a few hours…