ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಪಡೆಯುವ ನಿಯಮಗಳಲ್ಲಿ ಬದಲಾವಣೆ : ಬೊಮ್ಮಾಯಿ
ಬೆಂಗಳೂರು : ಲವ್ ಯು ರಚ್ಚು ಸಿನಿಮಾ ಶೂಟಿಂಗ್ ವೇಳೆ ಸಾಹಸ ಕಲಾವಿದ ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಪಡೆಯುವ ನಿಯಮಗಳಲ್ಲಿ ಬದಲಾವಣೆ ತರುತ್ತೇವೆ. ಚಿತ್ರೀಕರಣದ ನಿಯಮಗಳನ್ನು ಕೆಲವರು ಅನುಸರಿಸುತ್ತಿಲ್ಲ. ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ಹೊಸ ಆದೇಶಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.
ಅಜಯ್ ರಾವ್ ಹಾಗೂ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಲವ್ ಯು ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವನ್ನಪ್ಪಿದ್ದಾರೆ. 35 ವರ್ಷದ ವಿವೇಕ್ ಎಂಬುವವರು ಮೃತ ಫೈಟರ್ ಆಗಿದ್ದಾರೆ. ಪ್ರಕರಣ ಸಂಬಂಧ ನಿರ್ದೇಶಕ ಸೇರಿ ಮೂವರನ್ನ ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.. ಈ ಪ್ರಕರಣ ಸಂಬಂಧ ಬಿಡದಿ ಪೆÇಲೀಸರು, ನಿರ್ದೇಶಕ ಶಂಕರ್ ರಾಜ್, ನಿರ್ಮಾಪಕ ಗುರು ದೇಶಪಾಂಡೆ ಹಾಗೂ ಫೈಟ್ ಮಾಸ್ಟರ್ ವಿನೋದ್ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.









