ರಾಯಚೂರು: ಇಂದು ಸಚಿವ ಶಿವರಾಮ್ ಹೆಬ್ಬಾರ್ ಅವರು ರಾಯಚೂರಿನಲ್ಲಿರುವ ಇಎಸ್‍ಐ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಸ್ಥಿತಿಗತಿಗಳ ಕುರಿತಾಗಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆ ಸಿಬ್ಬಂದಿಯೊಂದಿಗೂ ಚರ್ಚೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಶಿವರಾಮ್ ಅವರು ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹರಿದಾಡ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸಿಎಂ ಬದಲಾವಣೆ ಸುದ್ದಿ ಕೇವಲ ವದಂತಿಯಷ್ಟೇ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯೇ ಇಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಮರ್ಥ ನಾಯಕತ್ವವನ್ನು ಹೊಂದಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಹೆಚ್ ವಿಶ್ವನಾಥ ಹಾಗೂ ಎಂಟಿಬಿ ನಾಗರಾಜ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯ ಮಂತ್ರಿಗಳಪರಮಾಧಿಕಾರ. ಸಚಿವ ಸಂಪುಟ ವಿಸ್ತರಣೆ, ಪುನರಚನೆ ಕೂಡ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದಿದ್ದಾರೆ.
ರಾಮ್ ಹೆಬ್ಬಾರ್ ಅವರು ರಾಯಚೂರಿನಲ್ಲಿರುವ ಇಎಸ್‍ಐ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಸ್ಥಿತಿಗತಿಗಳ ಕುರಿತಾಗಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆ ಸಿಬ್ಬಂದಿಯೊಂದಿಗೂ ಚರ್ಚೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಶಿವರಾಮ್ ಅವರು ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹರಿದಾಡ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸಿಎಂ ಬದಲಾವಣೆ ಸುದ್ದಿ ಕೇವಲ ವದಂತಿಯಷ್ಟೇ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯೇ ಇಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಮರ್ಥ ನಾಯಕತ್ವವನ್ನು ಹೊಂದಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಹೆಚ್ ವಿಶ್ವನಾಥ ಹಾಗೂ ಎಂಟಿಬಿ ನಾಗರಾಜ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯ ಮಂತ್ರಿಗಳಪರಮಾಧಿಕಾರ. ಸಚಿವ ಸಂಪುಟ ವಿಸ್ತರಣೆ, ಪುನರಚನೆ ಕೂಡ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದಿದ್ದಾರೆ.








