ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.
ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅವರನ್ನು ಅಮಾನತು ಗೃಹ ಸಚಿವ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ ಎಂದು ಐಜಿಪಿ ಮಾಹಿತಿ ನೀಡಿದ್ದಾರೆ.
ಚನ್ನಗಿರಿ ಪೊಲೀಸ್ ವಶದಲ್ಲಿದ್ದ ಆದಿಲ್ ಎಂಬ ಯುವಕ ಮೇ 24 ರಂದು ಸಾವನ್ನಪ್ಪಿದ್ದ. ರೊಚ್ಚಿಗೆದ್ದ ಕುಟುಂಬಸ್ಥರು, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಆರೋಪಿಸಿ ಚನ್ನಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿ, ಕಲ್ಲು ತೂರಾಟ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಅಧಿಕ ಜನರನ್ನು ಬಂಧಿಸಿದ್ದಾರೆ.